Mysore Story

ಆಗಸ್ಟ್ 29 ರಂದು ಸುತ್ತೂರು ಮಠದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108 ನೇ ಜಯಂತಿ ಕಾರ್ಯಕ್ರಮ

0

ಮೈಸೂರು- ಮೈಸೂರಿನ ಸುತ್ತೂರು ಮಠದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108 ನೇ ಜಯಂತಿ ಸಮಾರಂಭ ಆಗಸ್ಟ್ 29 ರಂದು ನಡೆಯಲಿದೆ.

ಮೈಸೂರಿನ ರಾಜೇಂದ್ರ ಭವನದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಈ ವಿಚಾರ ತಿಳಿಸಿದ ಜೆಎಸ್ಎಸ್ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬೆಟ್ಟಸೂರ ಮಠ ಅವರು, ಮೈಸೂರಿನ ಸುತ್ತೂರು ಮಠದಲ್ಲಿ ಅಂದು ನಡೆಯುವ ಸಮಾರಂಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.

ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಹಾಗೂ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಕೂಡ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.

‌ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾರಂಭ ಉದ್ಘಾಟನೆ ನೆರವೇರಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ಗಣ್ರರು ಭಾಗವಹಿಸಲಿದ್ದಾರೆ ಎಂದು ಡಾ.ಬೆಟ್ಟಸೂರ ಮಠ ತಿಳಿಸಿದರು.

ಅಂದು ಜೆಎಸ್ ಎಸ್ ಸಂಸ್ಥೆಯಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿರುವ 148 ಜನರಿಗೆ ಸನ್ಮಾನ ಮಾಡಲಿದ್ದು, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಬಹುಮಾನ ವಿತರಣೆ ಮಾಡಲಾಗುವುದು ಬೆಟ್ಟಸೂರ ಮಠ ವಿವರ ನೀಡಿದರು‌

siteadmin

ಇಸ್ರೊಗೆ ಸಿದ್ದರಾಮಯ್ಯ ಭೇಟಿ- ಸಿದ್ದರಾಮಯ್ಯ ಕೇಳಿದ ಪ್ರಶ್ನೆಗೆ “ಶಾಕ್” ಆದ ವಿಜ್ಞಾನಿಗಳು

Previous article

ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಇಸ್ರೋ- ಚಂದ್ರನ ಅಂಗಳದಲ್ಲಿ “ಪ್ರಜ್ಞಾನ್” ರೋವರ್ ಮೋಡಿ ನೋಡಿ

Next article

You may also like

Comments

Leave a reply

Your email address will not be published. Required fields are marked *

More in Mysore Story