Crime Alert

ದೇಶ ದ್ರೋಹಿಗಳ ವಿರುದ್ಧ ಕ್ರಮ ಖಚಿತ- ಡಿ.ಕೆ.ಶಿವಕುಮಾರ್

0

ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

“ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಿಷ್ಟು;

“ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದಾರೆ.

ಬಿಜೆಪಿಯವರು ತಮಗೆ ಬೇಕಾದವರ ಕೈಯಿಂದ ಏನೇ ವರದಿ ತರಿಸಿಕೊಳ್ಳಬಹುದು ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

*ಬಿಜೆಪಿ ಕಾರ್ಯಕರ್ತರ ಪ್ರಕರಣವೂ ತನಿಖೆ:*

ಕೆಲ ಸಚಿವರು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳಿದ್ದರ ಬಗ್ಗೆ ಕೇಳಿದಾಗ, “ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ಇಲ್ಲಿ ವಿಡಿಯೋ ತಿರುಚಿರಬಹುದು. ಇಲ್ಲಿ ನಮ್ಮ ಅಭಿಪ್ರಾಯಕ್ಕಿಂತ ಪೊಲೀಸರ ತನಿಖೆಯ ವರದಿ ಮುಖ್ಯ. ಈ ಪ್ರಕರಣದ ತನಿಖೆಗಾಗಿ ಧ್ವನಿ ಮಾದರಿ ನೀಡಬೇಕು. ನಿನ್ನೆಯೇ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಮಂಡ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಪ್ರಕರಣವನ್ನು ತನಿಖೆ ಮಾಡುತ್ತೇವೆ. ಬಿಜೆಪಿ ಸ್ನೇಹಿತರು ಅದಕ್ಕೂ ಉತ್ತರ ನೀಡಬೇಕು”ಎಂದು ತಿಳಿಸಿದರು.

ಇದರಿಂದ ಪಕ್ಷಕ್ಕೆ ಮುಜುಗರ ಆಗುವುದಿಲ್ಲವೇ ಎಂದು ಕೇಳಿದಾಗ, “ನನ್ನ ಪ್ರಕಾರ ಇಲ್ಲಿ ಯಾರೂ ತಪ್ಪು ಮಾಡಿಲ್ಲ. ಆದರೆ ತನಿಖೆ ಪ್ರಕ್ರಿಯೆಯಲ್ಲಿದೆ” ಎಂದು ತಿಳಿಸಿದರು.

 

siteadmin

ರಾಮೇಶ್ವರಂ ಕೆಫೆ ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದೆ

Previous article

ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ನಿಂದ ಬಿದ್ದ ವ್ಯಕ್ತಿ

Next article

You may also like

Comments

Leave a reply

Your email address will not be published. Required fields are marked *

More in Crime Alert