Karnataka

ಬರ ಪರಿಹಾರಕ್ಕೆ 861 ಕೋಟಿ ಲಭ್ಯವಿದೆ

0

*ಇಂದಿನ ಬರ ನಿರ್ವಹಣೆಗೆ ಸಂಬಂಧಿಸಿದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು*

• ಬರ ಘೋಷಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಮತ್ತು ಮೇವು ಒದಗಿಸಲು ಶಾಸಕರ ಅಧ್ಯಕ್ಷತೆಯಲ್ಲಿ 15 ದಿನಗಳಿಗೊಮ್ಮೆ ಟಾಸ್ಕ್‌ಫೋರ್ಸ್ ಸಭೆ ನಡೆಸಲಾಗುತ್ತಿದ್ದು, ಈವರೆಗೆ ತಾಲೂಕು ಮಟ್ಟದ 566 ಟಾಸ್ಕ್‌ಫೋರ್ಸ್ ಸಭೆಗಳನ್ನು ನಡೆಸಲಾಗಿದೆ. ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

• ಬರ ಘೋಷಿತ ತಾಲೂಕುಗಳಲ್ಲಿ ಪ್ರಕೃತಿ ವಿಕೋಪ ನಿವಾರಣೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ಸಭೆಯನ್ನು 15 ದಿನಗಳಿಗೊಮ್ಮೆ ನಡೆಸಲಾಗುತ್ತಿದ್ದು, ಈವರೆಗೆ 262 ಸಭೆಗಳನ್ನು ನಡೆಸಲಾಗಿದೆ.

• Bhoomi Data, Crop Survey Data ಮತ್ತು Fruits ತಂತ್ರಾಂಶದಲ್ಲಿ ನೋಂದಣಿಯಾಗಿರುವ 33.25 ಲಕ್ಷ ರೈತರಿಗೆ ರೂ.631.12 ಕೋಟಿ ಪರಿಹಾರವನ್ನು ನೇರವಾಗಿ ಖಾತೆಗೆ ವರ್ಗಾಯಿಸಲಾಗಿದೆ.

• ಅಂತರರಾಜ್ಯ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಿ 22/11/2023 ರಂದು ಆದೇಶ ಹೊರಡಿಸಲಾಗಿದೆ.

• ಮೇವಿನ ಕಿಟ್ ಖರೀದಿಸಲು SDRF ಅಡಿ ಪಶುಸಂಗೋಪನೆ ಇಲಾಖೆಗೆ 20 ಕೋಟಿ ನೀಡಲಾಗಿದ್ದು, 7.62 ಲಕ್ಷ ಮಿನಿ ಕಿಟ್‌ಗಳನ್ನು ಖರೀದಿಸಲಾಗಿದೆ. ಈ ಕಿಟ್‌ಗಳನ್ನು 4.19 ಲಕ್ಷ ರೈತರಿಗೆ ಉಚಿತವಾಗಿ ನೀಡಲಾಗಿದೆ.

• ಪ್ರಸ್ತುತ ರಾಜ್ಯದಲ್ಲಿ 144 ಲಕ್ಷ ಟನ್ ಮೇವು ಲಭ್ಯವಿದ್ದು ಮುಂದಿನ 27 ವಾರಗಳ ಬಳಕೆಗೆ ಸಾಕಾಗುತ್ತದೆ.

• ಗೋಶಾಲೆ ಹಾಗೂ ಮೇವಿನ ಬ್ಯಾಂಕ್‌ಗಳನ್ನು SDRF ಮಾರ್ಗಸೂಚಿಯ ಪ್ರಕಾರ ಅರ್ಹತೆಯಂತೆ ಸ್ಥಾಪಿಸಲು 4/12/2023 ರಂದು ಸುತ್ತೋಲೆ ಹೊರಡಿಸಲಾಗಿದೆ.

• ಟ್ಯಾಂಕರ್ ಹಾಗೂ ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲು ಹಾಗೂ 15 ದಿನಗಳಲ್ಲಿ ಬಿಲ್ಲು ಪಾವತಿಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

• ದಿನಾಂಕ 28/02/2024ರ ಅನ್ವಯ 117 ಗ್ರಾಮಗಳಿಗೆ 181 ಟ್ಯಾಂಕರ್ ಮೂಲಕ ಹಾಗೂ 354 ಗ್ರಾಮಗಳಿಗೆ 419 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲಾಗುತ್ತಿದೆ.

• 09 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 57 ವಾರ್ಡ್‌ಗಳಿಗೆ 17 ಟ್ಯಾಂಕರ್‌ಗಳ ಮೂಲಕ ಹಾಗೂ 29 ವಾರ್ಡ್‌ಗಳಿಗೆ 17 ಖಾಸಗಿ ಬೋರ್‌ವೆಲ್‌ಗಳ ಮೂಲಕ ತುರ್ತು ಕುಡಿಯುವ ನೀರು ಪೂರೈಸಲಾಗುತ್ತಿದೆ.

• ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಬಹುದಾದ ಒಟ್ಟು 7412 ಗ್ರಾಮಗಳನ್ನು ಹಾಗೂ 1115 ವಾರ್ಡ್‌ಗಳನ್ನು ಗುರುತಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಒಟ್ಟು 7108 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ.

• ಪ್ರಸಕ್ತ ಸಾಲಿನ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ರೂ.930.14 ಕೋಟಿ ಹಂಚಿಕೆಯಾಗಿದ್ದು, ಇದರ ಪೈಕಿ ಕೇಂದ್ರದ ಪಾಲು ರೂ.697.60 ಕೋಟಿ (75%). ಹಾಗೂ ರಾಜ್ಯದ ಪಾಲು ರೂ.232.54 ಕೋಟಿ (25%) ಇರುತ್ತದೆ. ಈ ಅನುದಾನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ರೂ.885.67 ಕೋಟಿ ಸೇರಿದಂತೆ ಒಟ್ಟು 1810.81 ಕೋಟಿ ಸಂಪೂರ್ಣ ಅನುದಾನವನ್ನು ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಸಹಮತ ನೀಡಿದ್ದು, ಈವರೆಗೆ ರೂ.1602.45 ಕೋಟಿಗಳನ್ನು ಬಿಡುಗಡೆಗೊಳಿಸಲಾಗಿದೆ.

• ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 725.92 ಕೋಟಿ ಹಾಗೂ ತಹಶೀಲ್ದಾರ್ ಖಾತೆಯಲ್ಲಿ ರೂ.135.40 ಕೋಟಿ ಸೇರಿದಂತೆ ಒಟ್ಟು ರೂ. 861.32 ಕೋಟಿ ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ.

siteadmin

ಕಾಂತರಾಜ ವರದಿನಾ, ಜಯ ಪ್ರಕಾಶ್ ಹೆಗಡೆ ವರದಿನಾ- ಬೊಮ್ಮಾಯಿ ಪ್ರಶ್ನೆ

Previous article

ಜಾತಿ ಗಣತಿ; ವರದಿ ನೋಡಿ ಅಂತಿಮ ನಿರ್ಧಾರ

Next article

You may also like

Comments

Leave a reply

Your email address will not be published. Required fields are marked *

More in Karnataka