Mysore Story

ಮೈಸೂರಿನಲ್ಲಿ ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಅನುಮತಿ ಕಡ್ಡಾಯ

0

ಕೊಳವೆಬಾವಿ ಕೊರೆಸಲು ಅನುಮತಿ ಕಡ್ಡಾಯ

ಮೈಸೂರು- ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಿಗ್ ಯಂತ್ರಗಳು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೊಂದಣಿಯಾಗಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಕೊರೆಯುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ ಅನುಮತಿ ಪಡೆಯದೆ ಕಾರ್ಯನಿರ್ವಹಿಸುವ ರಿಗ್ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ.

ಮೈಸೂರು ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಕೈಗಾರಿಕೆ/ ವಾಣಿಜ್ಯ/ ಮೂಲ ಸೌಕರ್ಯ ಅಭಿವೃದ್ಧಿ (Iಟಿಜಿಡಿಚಿsಣಡಿuಛಿಣuಡಿe)/ ಗಣಿಗಾರಿಕೆ/ ಮನೋರಂಜನೆ ಘಟಕಗಳು ಅಂತರ್ಜಲವನ್ನು ಬಳಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರ/ ಜಿಲ್ಲಾ ಅಂತರ್ಜಲ ಸಮಿತಿಯಿಂದ ನಿರಾಕ್ಷೇಪಣಾ ಪತ್ರ (ಓಔಅ) ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ https://kgwa.in/Public/ ವೆಬ್ ಪೋರ್ಟೆಲ್ ಅಥವಾ https://antharjala.karnataka.gov.In ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜಿಲ್ಲಾ ಅಂತರ್ಜಲ ಕಛೇರಿಯ ಹಿರಿಯ ಭೂವಿಜ್ಞಾನಿಯವರ ದೂ.ಸಂ:0821-2340619 ಅನ್ನು ಅಥವಾ ಇ-ಮೇಲ್: sggwsmys@gmail.com ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಸಮಿತಿಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

siteadmin

ಕಾಂಗ್ರೆಸ್ ಪ್ರಣಾಳಿಕೆ ನಕ್ಸಲಿಯರಿಂದ ಬಂದಂತಿದೆ- ಕಾಂಗ್ರೆಸ್ ಗೆ ದೇಶ ವಿಭಜಿಸುವ ರೋಗ ಹೋಗಿಲ್ಲ

Previous article

ಕೈ ಬಾಡುವುದಿಲ್ಲ, ಕಮಲ, ತೆನೆ ಬಾಡಿ ಹೋಗುತ್ತವೆ

Next article

You may also like

Comments

Leave a reply

Your email address will not be published. Required fields are marked *

More in Mysore Story