Mysore Story

ಮೈಸೂರಿನಲ್ಲಿ “ಹೊಸ ನಗರ” ನಿರ್ಮಾಣ- ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ ಇದರ ವೈಶಿಷ್ಟತೆ

0

ಬೆಂಗಳೂರು- ಮೈಸೂರು ಸೇರಿದಂತೆ ರಾಜ್ಯದಲ್ಲಿ 6 ಸಿಟಿಗಳಲ್ಲಿ ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಕಲಬುರ್ಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಟೆಕ್ ಸಮ್ಮಿಡ್ ನ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಪಕ್ಕ ಹೊಸ ನಗರ‌ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. ಆರು ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಾಗುವುದು. ಈ ಸಂಬಂಧ ಯೋಜನೆಯನ್ನು ರೂಪಿಸಲಾಗುವುದು.ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು, ಇದೂ ಕೂಡ ಆರು ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದರು.

ನಮ್ಮ ಪ್ರಧಾನಿಗಳು ಬಿಐಎಎಲ್ ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ತಂತ್ರಜ್ಞಾನಗಳೆಲ್ಲವೂ ವಿಶ್ವದ ಭವಿಷ್ಯಕ್ಕೆ ಮಾನವ ಅಭಿವೃದ್ಧಿ ಸಮಾವೇಶದ ಧ್ಯೇಯವಾಗಲಿ ಎಂದು ಹೇಳಿದರು.

ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ
ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕಳೆದ 25 ವರ್ಷಗಳಿಂದ ಬೆಂಗಳೂರು ಟೆಕ್ ಸಮ್ಮಿಟ್ ಯಶಸ್ವಿ ಯಾಗಿ ನಡೆಯುತ್ತಿದೆ.‌ಇದಕ್ಕೆ ಕಾರಣರಾದ ಎಲ್ಲರಿಗೂ ಮುಖ್ಯ ಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

ಸಮಾರಂಭದಲ್ಲಿ ಫಿನ್ ಲ್ಯಾಂಡ್ ನ ವಿಜ್ಞಾನ ಮತ್ತು ಸಂಸ್ಕೃತಿ ಸಚಿವ ಪೆಟ್ರಿ ಹೊನ್ ಕೊನೆನ್, ಯುನೈಟೆಡ್ ಎಮಿರೈಟ್ಸ್ ನ ಡಿಜಿಟಲ್ ಇಕಾಣಮಿ ಸಚಿವ ಓಮರ್ ಬಿನ್ ಸುಲ್ತಾನ್ ಅಲ್ ಒಲಾಮ, ಆಸ್ಟ್ರೇಲಿಯಾ ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ಟಿಮ್ ವ್ಯಾಟ್ ಐ.ಟಿ ಬಿ. ಟಿ ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಬಯೋ ಟೆಕ್ನಾಲಜಿ ವಿಷನ್ ಗ್ರೂಪ್ ಅಧ್ಯಕ್ಷೆ ಡಾ. ಕಿರಣ್ ಮಜುಂದಾರ್ ಶಾ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲ ಕೃಷ್ಣನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಐ.ಟಿ. ಬಿಟಿ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ.ರಮಣ ರೆಡ್ಡಿ, ಐ.ಟಿ. ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

siteadmin

ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣ ಹೊಡೆಯಲು ನೋಟಿಸ್- ಹೈವೆ ಅಥಾರಿಟಿ ಅಧಿಕಾರಿಗಳಿಂದ ತಾಕೀತು

Previous article

ಮೈಸೂರು

Next article

You may also like

Comments

Leave a reply

Your email address will not be published. Required fields are marked *

More in Mysore Story