Mysore Story

ಸಿದ್ದರಾಮಯ್ಯ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ- ಡಾ.ಯತೀಂದ್ರಗೆ ತರಾಟೆ

0

ಮೈಸೂರು- ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಚುನಾವಣಾ ಪ್ರಚಾರದ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು

ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ನೂರಾರು ಪ್ರತಿಭಟನಾಕಾರರು

ಚಾಮರಾಜನಗರ ಲೋಕಸಭಾ ಚುನಾವಣಾ ಹಿನ್ನೆಲೆ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸಂದರ್ಭ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು

ಪ್ರತಿಭಟನಾಕಾರರನ್ನು ಭೇಟಿ ಮಾಡಿ ಓಲೈಸಲು ಮುಂದಾದ ಯತೀಂದ್ರ ಅವರಿಗೆ ಹಿಗ್ಗಾ ಮಗ್ಗಾ ತರಾಟೆಗೆ ತೆಗೆದುಕೊಂಡರು.

ಚುನಾವಣೆ ಗೋಸ್ಕರ ಇಲ್ಲಿಗೆ ಬಂದಿದ್ದೀರಿ ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಕಿಡಿಕಾರಿದರು.

ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಇದನ್ನು ನಮ್ಮ ತಂದೆ ಯವರ ಗಮನಕ್ಕೆ ತರುವುದಾಗಿ ಎಂದು ಹೇಳುತ್ತಿದ್ದಂತೆ ಕುಪಿತಗೊಂಡ ಪ್ರತಿಭಟನಾಕಾರರು ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದರು

ಇದನ್ನು ಖಂಡಿಸಿ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು

ಪ್ರತಿಭಟನಕಾರರ ತರಾಟೆಯಿಂದ ಯತೀಂದ್ರ ಸಿದ್ದರಾಮಯ್ಯ ಬಂದ ದಾರಿಗೆ ಸುಂಕವಿಲ್ಲದಂತೆ ಅಲ್ಲಿಂದ ತರಾತುರಿಯಲ್ಲಿ ಕಾಲ್ಕಿತ್ತರು

siteadmin

ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆ

Previous article

ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ಬಿಜೆಪಿ ಫೈರ್ ಬ್ರ್ಯಾಂಡ್ ಖಷ್ಬೂ- ಕಾರಣ ಇದು

Next article

You may also like

Comments

Leave a reply

Your email address will not be published. Required fields are marked *

More in Mysore Story