Politics

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ- ಡಿ.ಕೆ.ಶಿವಕುಮಾರ್ ಎಚ್ಚರಿಕೆ

0

 

ಬೆಂಗಳೂರು- “ಸುಳ್ಳು ಸುದ್ದಿ ಹರಡುವವರನ್ನು ನಿಯಂತ್ರಿಸಲು ಗೃಹ ಇಲಾಖೆ, ಐಟಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸುಳ್ಳು ಸುದ್ದಿಯಿಂದ ಕೋಮುಗಲಭೆ, ಗದ್ದಲ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳ ಲಾಗುವುದು” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು,“ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ” ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

 

 

“ನಮ್ಮ ಸರ್ಕಾರ ನೂರು ದಿನಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆಲ್ಲೆಡೆ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.10 ಕೋಟಿ ಮನೆ ಯಜಮಾನಿಯರಿಗೆ ಆ. 30 ರಿಂದ ಪ್ರತಿ ತಿಂಗಳು 2 ಸಾವಿರ ರೂ. ಹಣ ತಲುಪಲಿದೆ. 1.36 ಲಕ್ಷ ಜನರಿಗೆ ಉಚಿತ ಅಕ್ಕಿ ತಲುಪುತ್ತಿದೆ. 1.41 ಕೋಟಿ ಗ್ರಾಹಕರಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆ. ಡಿಸೆಂಬರ್ ವೇಳೆಗೆ ನಿರುದ್ಯೋಗಿ ಯುವಕರಿಗೆ ಭತ್ಯೆ ಯೋಜನೆ ಜಾರಿ ಮಾಡುತ್ತೇವೆ.

ಇದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ. ನಾವು ಕೊಟ್ಟ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದು, ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಯಾವ ಸರ್ಕಾರ ಇಷ್ಟು ಕೆಲಸ ಮಾಡಿದೆ ಎಂದು ಹೇಳಿದರು.

 

 

siteadmin

ಯಶ್- ರಾಧಿಕಾ ಮನೆಯಲ್ಲಿ ಅದ್ದೂರಿ ವರಮಹಾಲಕ್ಷ್ಮಿ ಹಬ್ಬ- ಪೋಟೊ ಹಂಚಿಕೊಂಡ ರಾಕಿಂಕ್ ಸ್ಟಾರ್

Previous article

ಸಿನಿಮಾ ಸ್ಟೈಲ್​ನಲ್ಲಿ 40 ಅಡಿ ಕಾಂಪೌಂಡ್ ಹಾರಿ ಖೈದಿ ಎಸ್ಕೇಪ್‌‌

Next article

You may also like

Comments

Leave a reply

Your email address will not be published. Required fields are marked *

More in Politics