Health Tips

ಹೃದಯಾಘಾತ ದಿಢೀರ್ ಆಗುವುದಿಲ್ಲ!!- ಹಾರ್ಟ್ ಅಟ್ಯಾಕ್ ಲಕ್ಷಣಗಳೇನು…?- ‘ಗೋಲ್ಡನ್ ಅವರ್’ ಯಾವುದು…?

0

ಹೃದಯಾಘಾತದ ಬಗ್ಗೆ ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಆದರೆ ಹೃದಯಾಘಾತದ ಲಕ್ಷಣಗಳನ್ನು ಯಾರೂ ನಿರ್ಲಕ್ಷಿಸಬಾರದು.

ಗ್ಯಾಸ್ಟ್ರಿಕ್‌ನಿಂದ ಎದೆನೋವು ಎಂದು ಭಾವಿಸಿ ಮುಂದೂಡಬಾರದು. ಇದು ಹೃದಯಾಘಾತದ ಲಕ್ಷಣ, ಆದರೆ ಇದು ಹೃದಯಾಘಾತದ ಮುನ್ಸೂಚನೆ ಎಂದು ಅರಿವಾಗುವುದಿಲ್ಲ. ಈ ಲಕ್ಷಣ ಕಾಣಿಸಿಕೊಂಡಾಗ ಬೇರೆಯವರಿಗೂ ಮನೆಯವರಿಗೂ ಹೇಳುವುದಿಲ್ಲ.

ಹೃದಯಾಘಾತದ ಲಕ್ಷಣಗಳು ಹೀಗೆ ಇವೆ.

ವಿಪರೀತ ಬೆವರುವುದು,
ಸುಸ್ತಾಗುವುದು,
ಯಾವುದಾದರು ರಟ್ಟೆ ವಿಪರೀತ ನೋಯುವುದು,
ಎದೆ ಕಿವುಚಿದಂತೆ ಆಗುವುದು

ಇಂಥ ಲಕ್ಷಣಗಳು ಹೆಚ್ಚಾಗಿ ನಡಿಗೆ ಮಾಡುವಾಗಲೂ ಹಾಗೂ ಮೆಟ್ಟಿಲು ಹತ್ತುವಾಗಲೂ ಕಾಣಿಸುತ್ತವೆ, ನಿರ್ಲಕ್ಷಿಸದೆ ತಕ್ಷಣ ಆಸ್ಪತ್ರೆಯನ್ನು ಸೇರಬೇಕು.

ಗೊಲ್ಡನ್ ಅವರ್

ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯ ವ್ಯರ್ಥ ಮಾಡಬಾರದು. 40 ವರ್ಷದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ವಯಸ್ಸಾದವರು, ಈಗಾಗಲೇ ನಿತ್ಯ ಚಿಕಿತ್ಸೆಯಲ್ಲಿ ಇರುವವರು ಹೊರಗೆ ಹೋಗುವಾಗ ಯಾವಾಗಲು ಸಾಕಷ್ಟು ಹಣ, ಜಾರ್ಜ್ ಮಾಡಿದ ಮೊಬೈಲ್ ಎಟಿಎಂ ಕಾರ್ಡ್, ಐಡಿ ಕಾರ್ಡ್ ಮತ್ತು ನೀರಿನ ಬಾಟಲಿಯನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗವುದು ಶ್ರೇಯಕರ.

ಈ ಮೂಲಕ ಸಾವಿಗೆ ಹೆದರಬಾರದು, ಸಾವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು.
ಯೋಗ ಮಾಡುವುದರಿಂದ, ನಿತ್ಯ ನಡಿಗೆ ಮಾಡುವುದರಿಂದ, ಮಾಂಸಾಹಾರ, ಮೊಟ್ಟೆ ತಿನ್ನದೆ ಶುದ್ಧ ಶಾಖಾಹಾರಿ ಯಾಗಿರುವುದರಿಂದ, ಬೊಜ್ಜು ದಪ್ಪ ಇಲ್ಲದೆ ಇರುವುದರಿಂದ, ತೆಳ್ಳಗೆ ಇರುವುದರಿಂದ, ಚಿಕ್ಕ ವಯಸ್ಸು ಇರುವುದರಿಂದ ಹೃದಯಾಘಾತ ಆಗುವುದಿಲ್ಲ ಎಂಬುದು ತಪ್ಪು ತಿಳುವಳಿಕೆ. ಅನುವಂಶಿಕ ಕಾರಣಗಳು ಜೊತೆಗೆ ಇತರೆ ಕಾರಣಗಳು ಇರುತ್ತವೆ.

ಪ್ರತಿಯೊಬ್ಬರಿಗೂ ಹೃದಯದಲ್ಲಿ ರಕ್ತದ ಹೆಪ್ಪು(ಕ್ಲಾಟ್) ಸ್ವಲ್ಪವಾದರೂ ಇದ್ದೇ ಇರುತ್ತದೆ, ನಿಧಾನವಾಗಿ ಹೆಚ್ಚಾಗುತ್ತಿರುತ್ತದೆ. ನಡಿಗೆ, ವ್ಯಾಯಾಮ, ಸದಾ ಚಟುವಟಿಕೆ, ಸರಿಯಾದ ಆಹಾರ ಕ್ರಮ, ಸರಳ ಜೀವನ ಇಲ್ಲವಾದಲ್ಲಿ ಬೇಗ ಹೆಪ್ಪುಗಟ್ಟುವುದು (ಕ್ಲಾಕ್) ಹೆಚ್ಚಾಗುತ್ತಿರುತ್ತದೆ, ಆದರೆ ಮೇಲಿನ ಕಾರ್ಯ ಚಟುವಟಿಕೆಗಳನ್ನು ಪಾಲಿಸಿದರೆ ನಿಯಂತ್ರಣದಲ್ಲಿರುತ್ತದೆ.

ಈ ಹೃದಯದ ಖಾಯಿಲೆ ಇ.ಸಿ.ಜಿ ಮಾಡಿದಾಗ ಗೊತ್ತಾಗುತ್ತದೆ. ಆಶ್ಚರ್ಯವೆಂದರೆ ಎಷ್ಟೋ ಜನಕ್ಕೆ ಇ.ಸಿ.ಜಿ ಮತ್ತು ಎಕೋಗ್ರಾಮ್ ಮಾಡಿದಾಗ ಹೃದಯದ ಖಾಯಿಲೆ ತಿಳಿಯುವುದಿಲ್ಲ. ಆದರೆ ಟಿ.ಎಂ.ಟಿ ಪರೀಕ್ಷೆ ಮಾಡಿದಾಗ ಖಂಡಿತ ಸ್ವಲ್ಲ ಪ್ರಮಾಣವಾದರು ಪತ್ತೆ ಹಚ್ಚುತ್ತಾರೆ, ಆಗ ಅಂಜಿಯೋಗ್ರಾಮ್ ಮಾಡಿಸಬೇಕಾಗುತ್ತದೆ. ಅಂಜಿಯೋಗ್ರಾಮ್ ಪರೀಕ್ಷೆಯಲ್ಲಿ ಅತ್ಯಂತ ನಿಖರವಾಗಿ ಸ್ಪಷ್ಟವಾಗಿ ಕ್ಲಾಟ್ ಪ್ರಮಾಣ ಗೊತ್ತಾಗುತ್ತದೆ. ಕ್ಲಾಟ್‌ಗಳು ಒಂದಕ್ಕಿಂತ ಹೆಚ್ಚು ಮೇಲ್ಪಟ್ಟು ಕೂಡ ಪತ್ತೆಯಾಗಿರುವುದು. ನಂತರ ಸೂಕ್ತ ಚಿಕೆತ್ಸೆ ಪಡೆದುಕೊಂಡು ಆರಾಮವಾಗಿ ಆರೋಗ್ಯವಾಗಿರಬಹುದು. ಏನು ಹೆದರುವ ಅವಶ್ಯಕತೆ ಇಲ್ಲ. ಸದಾ ಚಟುವಟಿಕೆಯಿಂದ ಇದ್ದರೆ ತಾನು ಹೃದ್ರೋಗಿ ಎಂದು ಅನಿಸುವುದೇ ಇಲ್ಲ, ಎಲ್ಲರಂತೆ ಸುಖ ಜೀವನ ನಡೆಸಬಹುದು.

ಬೇರೆ ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ಹೊಂದಲು ಸಮಯವಿರುತ್ತದೆ. ಆದರೆ. ಹೃದಯ ಖಾಯಿಲೆ ಹಾಗಲ್ಲ, ಕೆಲವೊಮ್ಮೆ ಒಂದು ನಿಮಿಷ ಕೂಡ ಸಮಯವನ್ನೇ ನೀಡುವುದಿಲ್ಲ, ತಕ್ಷಣ ಸಾವಿಗೆ ನೂಕಿ ಬಿಡುತ್ತದೆ. ಬದುಕಲು ಅದೃಷ್ಟ ಬೇಕು.

ವೈದ್ಯರು ಹೇಳುವುದು ಒಂದೇ…

ಉತ್ತಮ ಆಹಾರ ಕ್ರಮ ಅನುಸರಿಸಿ
ಸದಾ ಚಟುವಟಿಕೆಯಿಂದ ಇರಿ
ಸರಳ ಜೀವನ ನಡೆಸಿ
ನಿಮ್ಮ ಕುಟುಂಬದ ಹಾಗು ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ,
ಹೆಂಡತಿ ಮಕ್ಕಳನ್ನು, ನಿಮ್ಮ ಕುಟುಂಬವನ್ನು ನಡು ನೀರಿನಲ್ಲಿ ಕೈ ಬಿಡಬೇಡಿ,
ಅವರಿಗಾಗಿ ಬಾಳಿ ಬದುಕಬೇಕು..

 

siteadmin

ಅತಿಯಾದ ‘ವರ್ಕೌಟ್’ ಅಪ್ಪು ಸಾವಿಗೆ ಕಾರಣವಾಯಿತೆ…?- ಮಿತಿ ಮೀರಿದ ವ್ಯಾಯಾಮ ಸಾವಿನ ದವಡೆಗೆ ದೂಡುತ್ತೆ…!

Previous article

ಅಪ್ಪು ಅಂತ್ಯಕ್ರಿಯೆ ನೆರವೇರಿಸಿದ ವಿನಯ್ ರಾಜ್ ಕುಮಾರ್- ಸಮಾಧಿ ಮೇಲೆ ತೊಳಸಿ ಗಿಡ ನೆಟ್ಟು ಪೂಜೆ ನೆರವೇರಿಸಿದ ಪತ್ನಿ, ಮಕ್ಕಳು

Next article

You may also like

Comments

Comments are closed.

More in Health Tips